ADVERTISEMENT

ಬೇತಮಂಗಲ: ಮಾನವ ಸರಪಳಿ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 7:25 IST
Last Updated 29 ಸೆಪ್ಟೆಂಬರ್ 2020, 7:25 IST
ಬೇತಮಂಗಲದ ಬಸ್ ನಿಲ್ಥಾಣದಲ್ಲಿ ವಿವಿಧ ರೈತ ಸಂಘಟನೆಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು
ಬೇತಮಂಗಲದ ಬಸ್ ನಿಲ್ಥಾಣದಲ್ಲಿ ವಿವಿಧ ರೈತ ಸಂಘಟನೆಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು   

ಬೇತಮಂಗಲ: ಕೇಂದ್ರ-ರಾಜ್ಯ ಸರ್ಕಾರಗಳು ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದನ್ನು ವಿರೋಧಿಸಿ ಸೋಮವಾರ ವಿವಿಧ ಸಂಘಟನೆಗಳಿಂದ ಹಮ್ಮಿಕೊಂಡಿದ್ದ ಬಂದ್‍ಗೆ ಬೇತಮಂಗಲದಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಯಿತು.

ಬೇತಮಂಗಲ ಗ್ರಾಮದ ಬಸ್ ನಿಲ್ದಾಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆಯಿಂದಲೇ ಅಂಗಡಿಗಳನ್ನು ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ರೈತ ಸಂಘ, ಹಸಿರು ಸೇನೆ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಕೇಂದ್ರ-ರಾಜ್ಯ ಸರ್ಕಾರ ಜಾರಿಗೊಳಿಸುವ ಕಾಯ್ದೆ ರೈತರ ಪಾಲಿಗೆ ಮರಣ ಶಾಸನವಾಗಲಿದೆ ಎಂದು ಶಾಸಕಿ ಎಂ.ರೂಪಕಲಾ ಶಶಿಧರ್ ಹೇಳಿದರು.

ADVERTISEMENT

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹುಲ್ಕೂರು ಹರಿಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅ.ಮು.ಲಕ್ಷ್ಮಿನಾರಾಯಣ, ನಾರಾಯಣ ಸ್ವಾಮಿ, ಎಪಿಎಂಸಿ ಅಧ್ಯಕ್ಷ ವಿಜಯ ರಾಘುವರೆಡ್ಡಿ, ಮಾಜಿ ಅಧ್ಯಕ್ಷ ವಿಜಿ ಶಂಕರ್, ಪದ್ಮನಾಭ ರೆಡ್ಡಿ, ಜಯರಾಮರೆಡ್ಡಿ, ವಿನು ಕಾರ್ತಿಕ್, ಡೈರಿ ಮಂಜುನಾಥ್, ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ವಡ್ಡಹಳ್ಳಿ ಮಂಜುನಾಥ್, ಸಹ ಕಾರ್ಯದರ್ಶಿ ಮಂಜುನಾಥ್, ವಿಶ್ವನಾಥ್, ವಡ್ಡಹಳ್ಳಿ ಲಕ್ಷ್ಮಿನಾರಾಯಣ್, ಕೋದಂಡಪ್ಪ, ಸುಬ್ರಮಣಿ, ಗಣೇಶ್, ತಂಬಾರ್ಲಹಳ್ಳಿ ಮುನೇಗೌಡ, ಮುನಿಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.