ADVERTISEMENT

ಬೇತಮಂಗಲದಲ್ಲಿ ಸಿದ್ದರಾಮೇಶ್ವರ ಜಯಂತಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2026, 7:03 IST
Last Updated 15 ಫೆಬ್ರುವರಿ 2026, 7:03 IST
ಬೇತಮಂಗಲ ಗ್ರಾಮದ ಬಸ್ ನಿಲ್ದಾಣದ ಅಂಬೇಡ್ಕರ್ ಪ್ರತಿಮೆಗೆ ಭೋವಿ ಸಮುದಾಯದ ಮುಖಂಡರು ಮಾಲಾರ್ಪಣೆ ಮಾಡಿ ಪುಪ್ಪ ಪಲ್ಲಕ್ಕಿಗಳ ಮೆರವಣಿಗೆಗೆ ಚಾಲನೆ ನೀಡಲಾಯಿತು
ಬೇತಮಂಗಲ ಗ್ರಾಮದ ಬಸ್ ನಿಲ್ದಾಣದ ಅಂಬೇಡ್ಕರ್ ಪ್ರತಿಮೆಗೆ ಭೋವಿ ಸಮುದಾಯದ ಮುಖಂಡರು ಮಾಲಾರ್ಪಣೆ ಮಾಡಿ ಪುಪ್ಪ ಪಲ್ಲಕ್ಕಿಗಳ ಮೆರವಣಿಗೆಗೆ ಚಾಲನೆ ನೀಡಲಾಯಿತು   

ಬೇತಮಂಗಲ: ಬೇತಮಂಗಲ ಗ್ರಾಮದಲ್ಲಿ ಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸಲಾಯಿತು.

ಗ್ರಾಮದ ಬಸ್ ನಿಲ್ದಾಣದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪಲ್ಲಕ್ಕಿಗಳ ಮೆರವಣಿಗೆಗೆ ಚಾಲನೆ ನೀಡಲಾಯಿತು. ಪಲ್ಲಕ್ಕಿ ಮೆರವಣಿಗೆಯಲ್ಲಿ ಜನಪ್ರತಿನಿಧಿಗಳು, ಸಮುದಾಯದ ಮುಖಂಡರು ಮತ್ತು ಪದಾಧಿಕಾರಿಗಳು ಭಾಗಿಯಾಗಿದ್ದರು. 

ಗ್ರಾಮಾಂತರ ಭಾಗದ ಭೋವಿ ಸಮುದಾಯದ ನೂರಾರು ಮಂದಿ ಕೆಜಿಎಫ್ ನಗರದಲ್ಲಿ ನಡೆಯುತ್ತಿರುವ ಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮಕ್ಕೆ ತೆರಳಿದರು. 

ADVERTISEMENT

ಮೆರವಣಿಗೆಯಲ್ಲಿ ಮಾಜಿ ಶಾಸಕ ಎಂ. ನಾರಾಯಣಸ್ವಾಮಿ, ಮುನಿರಾಜು, ಗೋಪಾಲ್, ವೆಂಕಟೇಶಪ್ಪ, ಜಿ. ಚಲಪತಿ, ಅನಂತ ರಾಮಪುರ ನಾರಾಯಣಪ್ಪ, ಬಾರ್ಲಿ ಚಂದ್ರ, ರಾಮಕೃಷ್ಣಪ್ಪ, ಎಸ್.ಆರ್. ನಾರಾಯಣಪ್ಪ, ಮಹದೇವಪುರ ಚಂದ್ರಪ್ಪ, ವೆಂಕಟೇಶ್, ಪ್ರಸಾದ್, ಬಾಬು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.