ADVERTISEMENT

ಹುಲ್ಕೂರು ಗ್ರಾ.ಪಂ: ಕೆರೆಗಳು ಹರಾಜು

​ಪ್ರಜಾವಾಣಿ ವಾರ್ತೆ
Published 9 ಜೂನ್ 2025, 16:20 IST
Last Updated 9 ಜೂನ್ 2025, 16:20 IST
ಬೇತಮಂಗಲ ಸಮೀಪದ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳಲ್ಲಿ ಮೀನು ಪಾಶುವಾರು ಹಕ್ಕಿನ ಹರಾಜು ನಡೆಯಿತು
ಬೇತಮಂಗಲ ಸಮೀಪದ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳಲ್ಲಿ ಮೀನು ಪಾಶುವಾರು ಹಕ್ಕಿನ ಹರಾಜು ನಡೆಯಿತು   

ಬೇತಮಂಗಲ: ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೀನುಗಳ ಸಾಕಾಣಿಕೆಗೆ ಕೆರೆಗಳ ಹರಾಜಿನಿಂದ ₹3,47,800 ಆದಾಯ ಬಂದಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೊಣ್ಣಮ್ಮ ರಮೇಶ್ ಹೇಳಿದರು. 

ಮೀನು ಪಾಶುವಾರು ಹಕ್ಕಿನ ಅಜಡಿ ಹರಾಜಿನಲ್ಲಿ ಸಂಗ್ರಹವಾದ ಹಣವನ್ನು ಗ್ರಾಮಗಳ ಮೂಲ ಸೌಕರ್ಯಗಳು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳುವುದಾಗಿ ತಿಳಿಸಿದರು.

ಬಹಿರಂಗ ಹರಾಜಿನಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮೀನುಗಾರರು ಪಾಲ್ಗೊಂಡಿದ್ದರು. 

ADVERTISEMENT

ಈ ಹರಾಜಿನಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಮೂರ್ತಿ, ಕಾರ್ಯದರ್ಶಿ ಕೃಷ್ಣಮೂರ್ತಿ, ಉಪಾಧ್ಯಕ್ಷೆ ಸುಧಾರಾಣಿ ಶಿವ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಮೀನುಗಾರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.