ADVERTISEMENT

ಬೈಕ್ ಕಳವು ಪ್ರಕರಣ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 5:07 IST
Last Updated 29 ಅಕ್ಟೋಬರ್ 2025, 5:07 IST
ಆರೋಪಿಗಳಿಂದ ವಶಪಡಿಸಿಕೊಂಡಿರುವ ವಾಹನಗಳೊಂದಿಗೆ ಬಂಗಾರಪೇಟೆ ಪೋಲಿಸರ ತಂಡ
ಆರೋಪಿಗಳಿಂದ ವಶಪಡಿಸಿಕೊಂಡಿರುವ ವಾಹನಗಳೊಂದಿಗೆ ಬಂಗಾರಪೇಟೆ ಪೋಲಿಸರ ತಂಡ   

ಬಂಗಾರಪೇಟೆ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾರಪೇಟೆ ಪೊಲೀಸರು ಇಬ್ಬರು ಆರೋಪಿಗಳನ್ನು ಮಂಗಳವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೋಲಾರ ನಗರದ ನಿವಾಸಿಗಳಾದ ಶಹಬಾಜ್ ಪಾಷ (22), ನಿಜಾಮ್ ಪಾಷ (21) ಬಂಧಿತ ಆರೋಪಿಗಳು. ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಅವರಿಂದ ₹3 ಲಕ್ಷ ಬೆಲೆ ಬಾಳುವ ಆರು ವೈಕ್‌ಗಳನ್ನು ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆ.26ರಂದು ಗುಲ್ಲಹಳ್ಳಿ ನಿವಾಸಿ ದೇವರಾಜ್ ಬಂಗಾರಪೇಟೆ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿರುವ ಬಗ್ಗೆ ನಗರದ ಠಾಣೆಗೆ ದೂರು ಸಲ್ಲಿಸಿದರು. ಇದರ ತನಿಖೆಯನ್ನು ಡಿವೈಎಸ್‌ಪಿ ವಿ.ಲಕ್ಷ್ಮಯ್ಯ ಅವರ ಮಾರ್ಗದರ್ಶನದಲ್ಲಿ ಬಂಗಾರಪೇಟೆ ಇನ್‌ಸ್ಪೆಕ್ಟರ್ ಆರ್.ದಯಾನಂದ್ ಮತ್ತು ಅಪರಾಧ ಪತ್ತೆ ತಂಡದವರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ಕಾರ್ಯಾಚರಣೆಯಲ್ಲಿ ಎ.ಎಸ್.ಐ ರಮೇಶ್, ಸಿಬ್ಬಂದಿಗಳಾದ ವೇಣುಗೋಪಾಲ್, ಮಂಜುನಾಥ್, ಗಜೇಂದ್ರ, ವಿಜಯ್ ಕುಮಾರ್, ಶ್ರೀನಿವಾಸ್, ಮುನೇಂದ್ರ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.