ADVERTISEMENT

ಚಿಕ್ಕಬಳ್ಳಾಪುರ ಸಂಸದ ಸುಧಾಕರ್ ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2025, 15:15 IST
Last Updated 1 ಫೆಬ್ರುವರಿ 2025, 15:15 IST
ಬೇತಮಂಗಲದ ಪ್ರವಾಸಿ ಮಂದಿರದಲ್ಲಿ ಕೆಜಿಎಫ್ ಗ್ರಾಮಾಂತರ ಭಾಗದ ಬಿಜೆಪಿ ಮುಖಂಡರು  ಪತ್ರಿಕಾಗೋಷ್ಠಿ ನಡೆಸಿದರು
ಬೇತಮಂಗಲದ ಪ್ರವಾಸಿ ಮಂದಿರದಲ್ಲಿ ಕೆಜಿಎಫ್ ಗ್ರಾಮಾಂತರ ಭಾಗದ ಬಿಜೆಪಿ ಮುಖಂಡರು  ಪತ್ರಿಕಾಗೋಷ್ಠಿ ನಡೆಸಿದರು   

ಬೇತಮಂಗಲ: ‘ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜೇಂದ್ರ ಅವರ ಕಾರ್ಯಕರ್ತರ ಶಕ್ತಿಯಿಂದಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ನೀವು, ಅವರ ವಿರುದ್ಧವೇ ತಿರುಗಿ ಬಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಚಿಕ್ಕಬಳ್ಳಾಪುರ ಸಂಸದ ಸುಧಾಕರ್ ವಿರುದ್ಧ ಕೆಜಿಎಫ್ ಕ್ಷೇತ್ರದ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುನೀಲ್ ಕುಮಾರ್, ಚಿಕ್ಕಬಳ್ಳಾಪುರ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಸಂದೀಪ್ ರೆಡ್ಡಿ ಅವರ ಪಕ್ಷ ಸಂಘಟನೆಯನ್ನು ಗುರುತಿಸಿ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ, ಸಂಸದ ಸುಧಾಕರ್ ಪಕ್ಷದ ಸಿದ್ಧಾಂತ ತಿಳಿಯದೆ ಹೇಳಿಕೆ ನೀಡುವುದು ಸಮಂಜಸವಲ್ಲ ಎಂದು ಎಚ್ಚರಿಕೆ ನೀಡಿದರು.

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಿಜೆಪಿ ಪಕ್ಷಕ್ಕಾಗಿ ಪ್ರಾಣ ಕೊಡುವ ಕಾರ್ಯಕರ್ತರು ಇದ್ದಾರೆ. ಆದರೆ ಕೆಲ ಹೊಂದಾಣಿಕೆ ನಾಯಕರಿಂದ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಆತ್ಮವಿಶ್ವಾಸ ಕುಂದುತ್ತಿದೆ. ಕೋಲಾರ ಜಿಲ್ಲೆಯ ನೂತನ ಅಧ್ಯಕ್ಷರಾದ ಓಂಶಕ್ತಿ ಚಲಪತಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಅಧ್ಯಕ್ಷ ಸಂದೀಪ್ ರೆಡ್ಡಿ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ. ಆದ್ದರಿಂದಲೇ ಅವರಿಗೆ ಈ ಫಲವಾಗಿ ಅವಕಾಶ ದೊರಕಿದೆ ಎಂದರು.

ADVERTISEMENT

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುನೀಲ್ ಕುಮಾರ್, ಟಿಎಪಿಸಿಎಂಎಸ್ ನಿರ್ದೇಶಕ ಪುರುಷೋತ್ತಮ್, ಗ್ರಾಮ ಪಂಚಾಯಿತಿ ಸದಸ್ಯರಾದ ನಾರಾಯಣ ಸ್ವಾಮಿ, ಗಣೇಶ್, ಸುಬ್ರಮಣಿ, ಸುಧಾಕರ್ ರೆಡ್ಡಿ, ಗಂಗಾಧರ್ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.