ADVERTISEMENT

ಅರ್ನಬ್‌ ಬಂಧನ: ಯುವ ಮೋರ್ಚಾದಿಂದ ಧರಣಿ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 1:47 IST
Last Updated 6 ನವೆಂಬರ್ 2020, 1:47 IST
ಮಾಲೂರು ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಗುರುವಾರ ಬಿಜೆಪಿ ತಾಲ್ಲೂಕು ಯುವ ಮೋರ್ಚಾದಿಂದ ಧರಣಿ ನಡೆಯಿತು
ಮಾಲೂರು ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಗುರುವಾರ ಬಿಜೆಪಿ ತಾಲ್ಲೂಕು ಯುವ ಮೋರ್ಚಾದಿಂದ ಧರಣಿ ನಡೆಯಿತು   

ಮಾಲೂರು: ಪತ್ರಕರ್ತ ಅರ್ನಬ್‌ ಗೋಸ್ವಾಮಿ ಅವರ ಬಂಧನ ಖಂಡಿಸಿ ತಾಲ್ಲೂಕು ಬಿಜೆಪಿ ಯುವ ಮೋರ್ಚಾದ ಸದಸ್ಯರು ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಗುರುವಾರ ಧರಣಿ ನಡೆಸಿದರು.

ಮುಖಂಡ ಗೋವಿಂದಸ್ವಾಮಿ ಮಾತನಾಡಿ, ಅರ್ನಬ್‌ ಗೋಸ್ವಾಮಿ ಅವರನ್ನು ಬಂಧಿಸಿರುವುದು ಖಂಡನೀಯ. ಸೋನಿಯಾ ಸೇನೆಯ ಕಾರ್ಯವೈಖರಿಯೂ ಖಂಡನಾರ್ಹ ಎಂದರು.

ಅರ್ನಬ್‌ ಬಾಲಿವುಡ್‌ನಲ್ಲಿ ಬೇರೂರಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಧ್ವನಿ ಎತ್ತಿದ್ದರು. ಹಾಗಾಗಿಯೇ, ಅವರ ಬಂಧನವಾಗಿದೆ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು.ಅವರಿಗೆ ಕೇಂದ್ರ ಸರ್ಕಾರ ರಕ್ಷಣೆ ನೀಡುವ ಮೂಲಕ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ನಂತರ ಶಿರಸ್ತೇದಾರ್ ನಾರಾಯಣಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ಪುರ ನಾರಾಯಣಸ್ವಾಮಿ, ಕಾರ್ಯದರ್ಶಿ ಸುರೇಶ್, ರಾಮಮೂರ್ತಿ, ಸುರೇಶ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.