ADVERTISEMENT

ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2025, 12:59 IST
Last Updated 12 ಡಿಸೆಂಬರ್ 2025, 12:59 IST
   

ಕೋಲಾರ: ನಗರ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್‌ ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ತಪಾಸಣೆ ನಡೆಸಿದ ಬಳಿಕ ಇದು ಹುಸಿ ಬಾಂಬ್ ಸಂದೇಶ ಎಂಬುದು ಗೊತ್ತಾಗಿದೆ.

ಜಿಲ್ಲಾಧಿಕಾರಿ ಇ-ಮೇಲ್ ಗೆ ಬೆಳಿಗ್ಗೆ 6.30ರ ಸುಮಾರಿಗೆ ಈ ಬೆದರಿಕೆ ಸಂದೇಶ ಬಂದಿದೆ. ಮಧ್ಯಾಹ್ನ 1.30ರ ಸುಮಾರಿಗೆ ಜಿಲ್ಲಾಧಿಕಾರಿ ಆಪ್ತ ಸಹಾಯಕರು ಪೊಲೀಸರ ಗಮನಕ್ಕೆ ತಂದಿದ್ದಾರೆ.

ಜಿಲ್ಲಾಧಿಕಾರಿ ಎಂ.ಆರ್.ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು‌. ಜಿಲ್ಲಾಡಳಿತ ಭವನದಲ್ಲಿದ್ದ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸರು ಹೊರಗೆ ‌ಕಳಿಸಿದರು.

ADVERTISEMENT

ಬಾಂಬ್ ನಿಷ್ಕ್ರಿಯ ದಳ,‌ ಶ್ವಾನದಳ ಪರಿಶೀಲಿಸಿದವು. ಪೊಲೀಸರು ಕಂಪ್ಯೂಟರ್ ವಶಕ್ಕೆ ಪಡೆದು ತಪಾಸಣೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.