ADVERTISEMENT

'ವಿದ್ಯಾರ್ಥಿಗಳು ನೈತಿಕ ಮೌಲ್ಯ ಬೆಳೆಸಿಕೊಳ್ಳಿ'

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 16:12 IST
Last Updated 26 ಜನವರಿ 2021, 16:12 IST
ಕೋಲಾರ ತಾಲ್ಲೂಕಿನ ದಿನ್ನೆಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಗಣರಾಜ್ಯೋತ್ಸವ ಆಚರಿಸಲಾಯಿತು.
ಕೋಲಾರ ತಾಲ್ಲೂಕಿನ ದಿನ್ನೆಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಗಣರಾಜ್ಯೋತ್ಸವ ಆಚರಿಸಲಾಯಿತು.   

ಕೋಲಾರ: ‘ಮಹನೀಯರ ಹೋರಾಟ, ತ್ಯಾಗ ಬಲಿದಾನದಿಂದ ನಾವೆಲ್ಲಾ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ. ವಿದ್ಯಾರ್ಥಿಗಳು ನೈತಿಕ ಮೌಲ್ಯ ಬೆಳೆಸಿಕೊಂಡು ಸತ್ಪ್ರಜೆಗಳಾಗಬೇಕು’ ಎಂದು ತಾಲ್ಲೂಕಿನ ದಿನ್ನೆಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಎನ್.ರಾಜೇಶ್ ಹೇಳಿದರು.

ದಿನ್ನೆಹೊಸಹಳ್ಳಿ ಶಾಲೆಯಲ್ಲಿ ಮಂಗಳವಾರ ನಡೆದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ‘ವಿದ್ಯಾರ್ಥಿಗಳು ದೇಶ ಸೇವೆಗೆ ಬದ್ಧರಾಗಬೇಕು. ಕ್ರೀಡೆಗಳಲ್ಲಿ ಆಸಕ್ತಿ ಬೆಳೆಸಿಕೊಂಡು ಉನ್ನತ ಸಾಧನೆ ಮಾಡುವ ಮೂಲಕ ದೇಶದ ಗೌರವ ಹೆಚ್ಚಿಸಬೇಕು’ ಎಂದು ಕಿವಿಮಾತು ಹೇಳಿದರು.

‘ಹೋರಾಟಗಾರರ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಹೋರಾಟವನ್ನೇ ಉಸಿರಾಗಿಸಿಕೊಂಡು ಬ್ರಿಟೀಷರ ವಿರುದ್ಧ ಜೀವದ ಹಂಗು ತೊರೆದು ಹೋರಾಡಿದ ಮಹನೀಯರನ್ನು ಎಲ್ಲರೂ ಸ್ಮರಿಸಬೇಕು. ದೇಶದಲ್ಲಿ ಸಾಕಷ್ಟು ಸಮಸ್ಯೆ ಎದುರಾಗಿವೆ. ಸಮಸ್ಯೆ ಪರಿಹಾರಕ್ಕೆ ಚಿಂತನೆ ನಡೆಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಶಾಲಾ ಎಸ್‌ಡಿಎಂಸಿ ಸದಸ್ಯರಾದ ಡಿ.ಎಂ.ಬೈರೇಗೌಡ, ಪಿ.ಶ್ರೀನಿವಾಸ್, ಡಿ.ಆರ್.ಪ್ರಭಾಕರ್, ಡಿ.ಸಿ.ವೆಂಕಟೇಶ್, ಡಿ.ಎಂ.ವೆಂಕಟರೆಡ್ಡಿ, ಮುಖ್ಯ ಶಿಕ್ಷಕ ಕೆ.ಟಿ.ನಾಗರಾಜ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.