
ಕಳವು
ಮುಳಬಾಗಿಲು: ಮನೆಯ ಬಾಗಿಲು ಒಡೆದು ಮನೆಯಲ್ಲಿದ್ದ 250 ಗ್ರಾಂ ಚಿನ್ನಾಭರಣ ಹಾಗೂ ₹2 ಲಕ್ಷ ನಗದು ಕಳ್ಳತನವಾಗಿರುವ ಘಟನೆ ಶನಿವಾರ ಕಪ್ಪಲಮಡಗು ಗ್ರಾಮದಲ್ಲಿ ನಡೆದಿದೆ.
ಮುಳಬಾಗಿಲು ತಾಲ್ಲೂಕಿನ ಕಪ್ಪಲಮಡಗು ಗ್ರಾಮದ ರೈತ ಅಬ್ಬಯ್ಯಣ್ಣ ತನ್ನ ಕುಟುಂಬದೊಂದಿಗೆ ಕೃಷಿ ಚಟುವಟಿಕೆಗೆಂದು ಮನೆಗೆ ಬೀಗ ಹಾಕಿ ತೋಟದ ಬಳಿಗೆ ಹೋಗಿದ್ದರು. ಸಂಜೆ ಮನೆಗೆ ಬರುವಷ್ಟರಲ್ಲಿ ಯಾರೋ ಮನೆಯ ಬಾಗಿಲು ಹೊಡೆದು ಮನೆಯಲ್ಲಿ ಚಿನ್ನಾಭರಣ ಹಾಗೂ ನಗದು ಕದ್ದು ಪರಾರಿಯಾಗಿರುವ ಬೆಳಕಿಗೆ ಬಂದಿದೆ.
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್, ಮುಳಬಾಗಿಲು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಮನಿಷಾ, ಗ್ರಾಮಾಂತರ ಸರ್ಕಲ್ ಇನ್‌ಸ್ಪೆಕ್ಟರ್ ಕೆ.ಜಿ.ಸತೀಶ್, ಸಬ್ ಇನ್‌ಸ್ಪೆಕ್ಟರ್ ಅರುಣ್‌ಗೌಡ ಪಾಟೀಲ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾನುವಾರ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.