
ಪ್ರಜಾವಾಣಿ ವಾರ್ತೆ
ಬೇತಮಂಗಲ: ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಂಕಿಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಬೇತಮಂಗಲದ ಹೊಸ ಬಡಾವಣೆಯ 8ನೇ ಬ್ಲಾಕ್ ನಿವಾಸಿ ಗಿರೀಶ್ (34) ಮೃತರು ಎಂದು ಗುರುತಿಸಲಾಗಿದೆ. ಮೃತರಿಗೆ ಪತ್ನಿ ಹಾಗೂ ಒಬ್ಬ ಮಗನಿದ್ದಾನೆ.
ಶನಿವಾರ ಕೆಲಸಕ್ಕೆಂದು ಮಿನಿ ಟೆಂಪೊ ತೆಗೆದುಕೊಂಡು ಹೋದವರು, ಭಾನುವಾರ ಬೆಳಗ್ಗೆ ಸುಟ್ಟ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಬೇತಮಂಗಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿಸಿದ್ದಾರೆ. ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಸಂಜೆ ಸ್ವಗ್ರಾಮದಲ್ಲಿ ಅಂತ್ರಕ್ರಿಯೆ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.