ADVERTISEMENT

ಬಸ್‌ ಡಿಕ್ಕಿ: ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 23 ಮೇ 2020, 15:52 IST
Last Updated 23 ಮೇ 2020, 15:52 IST

ಕೋಲಾರ: ತಾಲ್ಲೂಕಿನ ವಕ್ಕಲೇರಿ ಬಳಿ ಮಾಲೂರು ರಸ್ತೆಯಲ್ಲಿ ಶನಿವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ರೋಹಿಣಿ (45) ಎಂಬ ಮಹಿಳೆ ಮೃತಪಟ್ಟಿದ್ದಾರೆ.

ಅವರು ಪತಿ ಶ್ರೀನಿವಾಸ್‌ ಜತೆಗೆ ಕೆಜಿಎಫ್‌ನಿಂದ ಬೈಕ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಟ್ಟಿಗೇನಹಳ್ಳಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಬಸ್‌ ದಂಪತಿಯ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಕೆಳಗೆ ಬಿದ್ದ ರೋಹಿಣಿ ಅವರ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಿವಾಸ್‌ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಸ್‌ ಚಾಲಕನನ್ನು ಬಂಧಿಸಿ ವಾಹನ ವಶಪಡಿಸಿಕೊಂಡಿದ್ದಾರೆ. ದೂರು ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.