ADVERTISEMENT

ಗ್ರಾ.ಪಂ ಸದಸ್ಯರಿಗೆ ಸಾಮರ್ಥ್ಯ ಬೆಳವಣಿಗೆ ತರಬೇತಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 15:25 IST
Last Updated 23 ಫೆಬ್ರುವರಿ 2021, 15:25 IST
ಕೋಲಾರದಲ್ಲಿ ಮಂಗಳವಾರ ನಡೆದ ಗ್ರಾಮ ಪಂಚಾಯಿತಿ ನೂತನ ಸದಸ್ಯರ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಪಾಲ್ಗೊಂಡರು.
ಕೋಲಾರದಲ್ಲಿ ಮಂಗಳವಾರ ನಡೆದ ಗ್ರಾಮ ಪಂಚಾಯಿತಿ ನೂತನ ಸದಸ್ಯರ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಪಾಲ್ಗೊಂಡರು.   

ಕೋಲಾರ: ‘ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಆಯ್ಕೆಯಾಗಿರುವ ನೂತನ ಸದಸ್ಯರಿಗೆ ಗ್ರಾ.ಪಂ ಆಡಳಿತ ವ್ಯವಸ್ಥೆ ಕುರಿತು 2ನೇ ಬಾರಿಗೆ ಸಾಮರ್ಥ್ಯ ಬೆಳವಣಿಗೆಯ ತರಬೇತಿ ನೀಡಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ತಿಳಿಸಿದರು.

ಗ್ರಾ.ಪಂ ನೂತನ ಸದಸ್ಯರಿಗೆ ಇಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ರಾಜ್ಯದ 90 ಸಾವಿರ ಮಂದಿ ಗ್ರಾ.ಪಂ ನೂತನ ಸದಸ್ಯರಿಗೆ 5 ದಿನ ತರಬೇತಿ ನೀಡಲಾಗುತ್ತದೆ. ಪ್ರತಿ ತಿಂಗಳು ಮೊದಲನೇ ಮತ್ತು ಮೂರನೇ ಶನಿವಾರದಂದು ವರ್ಷಕ್ಕೆ 24 ಬಾರಿ ಆನ್‌ಲೈನ್‌ನಲ್ಲಿ ತರಬೇತಿ ಕೊಡಲಾಗುತ್ತದೆ’ ಎಂದು ವಿವರಿಸಿದರು.

‘ತರಬೇತಿಯಲ್ಲಿ ಗ್ರಾಮಗಳ ಅಭಿವೃದ್ಧಿ ಸಂಬಂಧ ಸದಸ್ಯರಿಗೆ ಮಾಹಿತಿ ನೀಡಲಾಗುತ್ತದೆ. ನರೇಗಾ ಯೋಜನೆಯಡಿ ಒಂದು ಗ್ರಾ.ಪಂ ವ್ಯಾಪ್ತಿಯಲ್ಲಿ ತಲಾ ಒಂದು ಮಳಿಗೆ ಕಟ್ಟಿಸಬಹುದು. ಮಹಿಳಾ ಸ್ವಸಹಾಯ ಗುಂಪಿಗೆ ಭವನ, ಗ್ರಂಥಾಲಯ, ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸಬಹುದು. ಗ್ರಾ.ಪಂ ಕೆಲ ಕ್ಷೇತ್ರಗಳಿಗೆ ಸೀಮಿತವಾಗದೆ ಎಲ್ಲಾ ರೀತಿಯ ಅಭಿವೃದ್ಧಿ ಕೆಲಸ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

ADVERTISEMENT

‘ಗ್ರಾ.ಪಂ ಸದಸ್ಯರು ನಿಯಮಿತವಾಗಿ ಅಂಗನವಾಡಿಗಳಿಗೆ ಭೇಟಿ ನೀಡಬೇಕು. ಗರ್ಭಿಣಿಯರಿಗೆ ಹಾಲಿನ ಪುಡಿ ವಿತರಿಸಲಾಗುತ್ತಿದೆಯೇ, ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ಕುಡಿಯುವ ನೀರು, ರಸ್ತೆ, ಚರಂಡಿ, ಆರೋಗ್ಯ, ನೈರ್ಮಲ್ಯ, ಮಕ್ಕಳ ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು’ ಎಂದು ಸಲಹೆ ನೀಡಿದರು.

ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್, ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.