ಕೆಜಿಎಫ್: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮ ಒಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಸೋಮವಾರ ಮುಂಜಾನೆ ನಗರದ ಹೊರವಲಯದ ಕೃಷ್ಣಾಪುರದಲ್ಲಿ ನಡೆದಿದೆ.
ಖಾಸಗಿ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕೃಷ್ಣಾಪುರ ಬಳಿಯ ಸೇತುವೆ ಇಂದ ಕೆಳಕ್ಕೆ ಬಿದ್ದ ಕಾರು ಪಲ್ಟಿ ಹೊಡೆದಿದೆ. ಕಾರಿನಲ್ಲಿದ್ದ ಕರುಣ (48) ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲಿ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ದೇವಿ, ವೀಣಾ ಸಾಯಿ, ಶರಣ್ ಮತ್ತು ಡೆನ್ನಿಸ್ ಗಾಯಗೊಂಡು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಡು ರಾತ್ರಿಯಲ್ಲಿ ಗಾಯಾಳುಗಳನ್ನು ರಕ್ಷಿಸುವಲ್ಲಿ ಪೊಲೀಸ್ ಹೈವೇ ಪೆಟ್ರೋಲಿಂಗ್ ಸಿಬ್ಬಂದಿ ನೆರವಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.