ಶ್ರೀನಿವಾಸಪುರ: ‘ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ ಮತ್ತೊಬ್ಬರಿಗೆ ಮಾದರಿಯಾಗಿ. ಯಾವುದೇ ಹಬ್ಬ ಸಂಭ್ರಮದಿಂದ ಕೂಡಿರಬೇಕೇ ಹೊರತು ಸಮಾಜದ ಸ್ವಾಸ್ಥ್ಯ ಕೆಡಿಸುವಂತೆ ಇರಬಾರದು’ ಎಂದು ಶ್ರೀನಿವಾಸಪುರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಎಂ.ಬಿ.ಗೊರವನಕೊಳ್ಳ ಹೇಳಿದರು.
ಬಕ್ರೀದ್ ಹಬ್ಬದ ಪ್ರಯುಕ್ತ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಂಗಳವಾರ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.
‘ಕೆಲಸ ಕಾರ್ಯಗಳ ಬಗ್ಗೆ ಜಾಗರೂಕರಾಗಿ ಇರಬೇಕು. ಯಾವುದೇ ಕಾರಣಕ್ಕೂ ಧಾರ್ಮಿಕ ಕೆಲಸ ಕಾರ್ಯಗಳಿಗೆ ಧಕ್ಕೆ ಆಗದಂತೆ ನಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.
‘ಸಮಾಜದಲ್ಲಿ ಶಾಂತಿ ಕದಡುವವರನ್ನು ಇಲಾಖೆ ಬಿಡುವುದಿಲ್ಲ. ಪೊಲೀಸ್ ಇಲಾಖೆ ಎಲ್ಲಾ ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ, ಒಳ್ಳೆಯ ಸಮಾಜವನ್ನು ನಿರ್ಮಾಣ ಮಾಡಲು ಸಾರ್ವಜನಿಕರು ಇಲಾಖೆಗೆ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.
ಪಿಎಸ್‍ಐ ಜಯರಾಮ್, ಸಿಬ್ಬಂದಿ ರಾಜೇಶ್, ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ವೇಣುಗೋಪಾಲರೆಡ್ಡಿ, ಮುಖಂಡರಾದ ಪ್ರಭಾಕರಗೌಡ, ರಾಮಾಂಜಮ್ಮ, ಚಲ್ದಿಗಾನಹಳ್ಳಿ ಈರಪ್ಪ, ಮುನಿವೆಂಕಟಪ್ಪ, ನಾಗದೇನಹಳ್ಳಿ ಶ್ರೀನಿವಾಸ್, ಸಾಧಿಕ್‍ಅಹ್ಮದ್, ಮಹಬೂಬ್ ಪಾಷ, ಲಕ್ಕಿ, ಫಾರೂಕ್‍ಪಾಷ, ಅಬ್ದುಲ್ಲಾ, ಕಾರ್ತಿಕ್, ಹೊಗಳಗೆರೆ ಆಂಜಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.