
ಪ್ರಜಾವಾಣಿ ವಾರ್ತೆ
ಆದೇಶ
ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯತಿಯ ಪ್ರಭಾರ ಅಧ್ಯಕ್ಷರಾಗಿ ಉಪಾಧ್ಯಕ್ಷೆ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯೆ ನಾಗರತ್ನಮ್ಮ ಅಧಿಕಾರ ಸ್ವೀಕರಿಸಿದರು.
ಈ ಹಿಂದಿನ ಅಧ್ಯಕ್ಷರ ವಿರುದ್ಧ ಪಂಚಾಯಿತಿಯ ಎಲ್ಲಾ ಸದಸ್ಯರು ಒಮ್ಮತದಿಂದ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನವು ತೆರವಾಗಿತ್ತು. ಮುಂದಿನ ಅಧ್ಯಕ್ಷರ ಚುನಾವಣೆ ನಡೆಯುವವರೆಗೆ ನಾಗರತ್ನಮ್ಮ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮೊಗಳಹಳ್ಳಿ ಗ್ರಾಮದ ಸದಸ್ಯ ಲಕ್ಷ್ಮಣ್ ರೆಡ್ಡಿ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.