ADVERTISEMENT

ಕೋಲಾರ: ಬಾಲಕಿಗೆ ಲೈಂಗಿಕ ‌ಕಿರುಕುಳ; ರೈತ ಸಂಘದ ಜಿಲ್ಲಾಧ್ಯಕ್ಷ ಬಂಧನ

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 5:18 IST
Last Updated 27 ಜನವರಿ 2026, 5:18 IST
   

ಬಂಗಾರಪೇಟೆ (ಕೋಲಾರ): ಬಾಲಕಿಗೆ‌ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರೈತ ಸಂಘದ ಜಿಲ್ಲಾಧ್ಯಕ್ಷ ರಾಮೇಗೌಡ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

14 ವರ್ಷದ ಬಾಲಕಿಯನ್ನು ನಾಲ್ಕು ತಿಂಗಳ ಗರ್ಭಿಣಿಯನ್ನಾಗಿಸಿದ‌ ಆರೋಪವಿದ್ದು, ಸಂತ್ರಸ್ತೆಯ ಕುಟುಂಬ ನೀಡಿದ ದೂರಿನ ಮೇರೆಗೆ ಪೋಕ್ಸೊ‌ ಕಾಯ್ದೆಯಡಿ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ.

ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.