ADVERTISEMENT

ಮಕ್ಕಳ ಸಂತೆ: ವ್ಯಾಪಾರ ಜೋರು

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2019, 13:18 IST
Last Updated 14 ನವೆಂಬರ್ 2019, 13:18 IST
ಕೋಲಾರ ತಾಲ್ಲೂಕಿನ ಸೀತಿ ಗ್ರಾಮದ ನೀಲಕಂಠೇಶ್ವರ ವಿದ್ಯಾಸಂಸ್ಥೆಯಲ್ಲಿ ಗುರುವಾರ ಮಕ್ಕಳ ಸಂತೆ ನಡೆಯಿತು.
ಕೋಲಾರ ತಾಲ್ಲೂಕಿನ ಸೀತಿ ಗ್ರಾಮದ ನೀಲಕಂಠೇಶ್ವರ ವಿದ್ಯಾಸಂಸ್ಥೆಯಲ್ಲಿ ಗುರುವಾರ ಮಕ್ಕಳ ಸಂತೆ ನಡೆಯಿತು.   

ಕೋಲಾರ: ತಾಲ್ಲೂಕಿನ ಸೀತಿ ನೀಲಕಂಠೇಶ್ವರ ವಿದ್ಯಾಸಂಸ್ಥೆಯಲ್ಲಿ ಆವರಣದಲ್ಲಿ ಗುರುವಾರ ನಡೆದ ಮಕ್ಕಳ ಸಂತೆಯಲ್ಲಿ ವ್ಯಾಪಾರ ಜೋರಾಗಿಯೆ ನಡೆಯಿತು.

ಸಂತೆಯಲ್ಲಿ ವಿವಿಧ ಬಗೆಯ ಸೊಪ್ಪು, ತರಕಾರಿ, ಬೇಲ್‍ಪುರಿ, ಬೋಂಡಾ, ಬಜ್ಜಿ, ಕಾಫಿ, ಟೀ ಸೇರಿದಂತೆ ಹಲವು ವಸ್ತುಗಳನ್ನು ಮಾರಾಟ ಮಾಡಲಾಯಿತು. ಮಕ್ಕಳು ಸಾರ್ವಜನಿಕರಿಗೆ ಮಾರುತ್ತಿದ್ದ ವಸ್ತುಗಳ ವ್ಯಾಪಾರ ನೈಜ ವ್ಯಾಪಾರಸ್ಥರನ್ನು ನಾಚಿಸುವಂತಿತ್ತು.

ಪರಸ್ಪರ ಸ್ವರ್ಧಾ ಮನೋಭಾವದಿಂದ ಮಕ್ಕಳು ನಾವೇ ಹೆಚ್ಚು ವ್ಯಾಪಾರ ಮಾಡಬೇಕು ಎಂಬ ಛಲದಿಂದ ಪೋಷಕರನ್ನು ಕರೆದು ತಮ್ಮ ಅಂಗಡಿಯ ಸಾಮಗ್ರಿ ಖರೀದಿಸಲು ಒತ್ತಾಯಿಸುತ್ತಿದ್ದರು.

ADVERTISEMENT

ಖಾಸಗಿ ಶಾಲೆಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಸದಾನಂದ್ ಮಕ್ಕಳ ಸಂತೆ ಚಾಲನೆ ನೀಡಿ ಮಾತನಾಡಿ, ‘ಮಕ್ಕಳಲ್ಲಿ ವ್ಯಾವಹಾರ ಜ್ಞಾನ ಅಭಿವೃದ್ದಿಗೆ ಮಕ್ಕಳ ಸಂತೆ ಹೆಚ್ಚು ಪ್ರೇರಣೆ ನೀಡುತ್ತದೆ’ ಎಂದು ಅಭಿಪ್ರಾಯಪಟ್ಟರು.

‘ಮಕ್ಕಳನ್ನು ಪಠ್ಯಕ್ಕೆ ಸೀಮಿತ ಮಾಡುವುದು ಸರಿಯಲ್ಲ. ಸಮಗ್ರ ಶಿಕ್ಷಣದ ಭಾಗವಾಗಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ಎಂದರು.

‘ಮಕ್ಕಳು ಜೀವನ ನಡೆಸಲು ವ್ಯವಹಾರ ಜ್ಞಾನದ ಅರಿವು ಮೂಡಿಸಬೇಕು. ಪೋಷಕರು ಮಕ್ಕಳನ್ನು ಅಂಗಡಿಗೆ ಕಳುಹಿಸಿದರೆ ವ್ಯಾಪಾರ ಮಾಡಿ ಸಾಮಗ್ರಿ ತರುವ ಶಕ್ತಿ ಬೆಳೆಸಿಕೊಳ್ಳುತ್ತಾರೆ. ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಶಾಸ್ತ್ರಕ್ಕೆ ಬೇಡಿಕೆ ಹೆಚ್ಚುತ್ತಿದೆ. ಅನೇಕ ಉದ್ಯಮಗಳಲ್ಲಿ ವಾಣಿಜ್ಯ ಪದವಿಗೆ ಆದ್ಯತೆ ನೀಡಲಾಗುತ್ತಿದೆ. ಮಕ್ಕಳಲ್ಲಿ ಪ್ರಾಯೋಗಿಕವಾಗಿ ವ್ಯವಹಾರ ಜ್ಞಾನ ಬೆಳೆಸಲು ಮಕ್ಕಳ ಸಂತೆಗಳು ನಡೆಸಬೇಕು’ ಎಂದು ಸಲಹೆ ನೀಡಿದರು.

ಖಾಸಗಿ ಶಾಲೆಗಳ ಸಂಘದ ಸಂಘದ ಕಾರ್ಯದರ್ಶಿ ಪುರುಷೋತ್ತಮ್, ಗೌರವಾಧ್ಯಕ್ಷ ಜೋಸೆಫ್, ಸದಸ್ಯ ಪ್ರಭಾಕರ್, ನೀಲಕಂಠೇಶ್ವರ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಗಿರಿಜಮ್ಮ, ಸಹ ಶಿಕ್ಷಕರಾದ ಸುಜಾತಮ್ಮ, ಚೌಡೇಶ್ವರಿ, ವೇಣು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.