ADVERTISEMENT

ಮಕ್ಕಳಿಗೆ ನೈತಿಕ ಶಿಕ್ಷಣ ಅಗತ್ಯ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 5:04 IST
Last Updated 1 ಜುಲೈ 2021, 5:04 IST
ಮಾಲೂರು ಪಟ್ಟಣದ ಬಿಇಒ ಕಚೇರಿ ಆವರಣದಲ್ಲಿ ಬುಧವಾರ ಸೇವಾ ನಿವೃತ್ತಿ ಹೊಂದುತ್ತಿರುವ ಶಿಕ್ಷಕರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಬಿಇಒ ಕೃಷ್ಣಮೂರ್ತಿ ಅವರು ನಿವೃತ್ತ ಶಿಕ್ಷಕರಾದ ಅಶ್ವಥನಾರಾಣಗೌಡ, ವರಲಕ್ಷ್ಮಿ, ಡಿ.ಸಿ. ಮುನಿರಾಜು, ಜಾಕೀರ್ ಉನ್ನಿಸ್ಯಾ ಅವರನ್ನು ಅಭಿನಂದಿಸಿದರು
ಮಾಲೂರು ಪಟ್ಟಣದ ಬಿಇಒ ಕಚೇರಿ ಆವರಣದಲ್ಲಿ ಬುಧವಾರ ಸೇವಾ ನಿವೃತ್ತಿ ಹೊಂದುತ್ತಿರುವ ಶಿಕ್ಷಕರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಬಿಇಒ ಕೃಷ್ಣಮೂರ್ತಿ ಅವರು ನಿವೃತ್ತ ಶಿಕ್ಷಕರಾದ ಅಶ್ವಥನಾರಾಣಗೌಡ, ವರಲಕ್ಷ್ಮಿ, ಡಿ.ಸಿ. ಮುನಿರಾಜು, ಜಾಕೀರ್ ಉನ್ನಿಸ್ಯಾ ಅವರನ್ನು ಅಭಿನಂದಿಸಿದರು   

ಮಾಲೂರು: ‘ಶಿಕ್ಷಕರು ಶಾಲೆಗಳಲ್ಲಿ ಪ್ರಾಮಾಣಿಕವಾಗಿ ಮಕ್ಕಳಿಗೆ ನೈತಿಕ ಶಿಕ್ಷಣ ನೀಡಿದಾಗ ಮಕ್ಕಳ ಭವಿಷ್ಯ ಉಜ್ವಲವಾಗಿರುತ್ತದೆ’ ಎಂದು ಬಿಇಒ ಕೃಷ್ಣಮೂರ್ತಿ ತಿಳಿಸಿದರು.

ಪಟ್ಟಣದ ಬಿಇಒ ಕಚೇರಿ ಆವರಣದಲ್ಲಿ ಬುಧವಾರ ಸೇವಾ ನಿವೃತ್ತಿ ಹೊಂದುತ್ತಿರುವ ಶಿಕ್ಷಕರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅಭಿನಂದಿಸಿ ಅವರು ಮಾತನಾಡಿದರು.

ಮಕ್ಕಳ ಶೈಕ್ಷಣಿಕ ಪ್ರಗತಿಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು. ತಾಲ್ಲೂಕಿನಲ್ಲಿ ಕೋವಿಡ್ ಸೋಂಕು ತಡೆಗಟ್ಟಲು ಶಿಕ್ಷಕರಿಗೆ ನೀಡಿದ ಕೆಲಸವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿ ಆರೋಗ್ಯ ಇಲಾಖೆಗೆ ಸಹಕಾರ ನೀಡಿದ್ದಾರೆ ಎಂದರು.

ADVERTISEMENT

ಕೋವಿಡ್‌ನಿಂದ ಕಳೆದ ಒಂದೂವರೆ ವರ್ಷದಿಂದ ರಜೆ ನೀಡಲಾಗಿದೆ. ಸೋಂಕು ನಿಯಂತ್ರಣಕ್ಕೆ ಬಂದಿದೆ. ಶಾಲೆ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸರ್ಕಾರ ಆದೇಶ ನೀಡಿದೆ. ಶಾಲೆಗಳಿಗೆ ಶಿಕ್ಷಕರು ಪ್ರತಿ ನಿತ್ಯಬೇಟಿ ನೀಡಿ ಮಕ್ಕಳ ದಾಖಲಾತಿ ಸೇರಿದಂತೆ ಇನ್ನಿತರೆ ಕಾರ್ಯ ನಡೆಸುತ್ತಿದ್ದಾರೆ ಎಂದು ಹೇಳಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆರ್. ನರಸಿಂಹ ಮಾತನಾಡಿ, ಸಂಘ ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಮೂಲಕ ಸರ್ಕಾರದಿಂದ ಸಿಗುವ ಸವಲತ್ತು ಕೊಡಿಸಲಾಗುತ್ತಿದೆ. ಅಲ್ಲದೇ, ನಿವೃತ್ತಿ ಹೊಂದುವ ಶಿಕ್ಷಕರನ್ನು ಸಂಘದಿಂದ ಅಭಿನಂದಿಸಿ ಬೀಳ್ಕೊಡುಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಅಶ್ವಥನಾರಾಣಗೌಡ, ವರಲಕ್ಷ್ಮಿ, ಡಿ.ಸಿ. ಮುನಿರಾಜು ಮತ್ತು ಜಾಕೀರ್ ಉನ್ನಿಸ್ಯಾ ಅವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಶಶಿಧರ್, ಪ್ರಧಾನ ಕಾರ್ಯದರ್ಶಿ ಎಂ.ಸಿ. ಮುನಿರಾಜು, ಕಾರ್ಯದರ್ಶಿ ಅರ್ಜುನ್, ಖಜಾಂಚಿ ಚಿಕ್ಕವೆಂಕಟೇಶ್, ಜಿಲ್ಲಾ ಉಪಾಧ್ಯಕ್ಷ ರಮೇಶ್, ಪ್ರತಿನಿಧಿಗಳಾದ ಷಣ್ಮುಖಯ್ಯ, ಭಗತ್ ಸಿಂಗ್, ಚನ್ನಪ್ಪ, ಚಂದ್ರಕಲಾ, ರಾಜೇಶ್ವರಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.