ಮುಳಬಾಗಿಲು ತಾಲ್ಲೂಕಿನ ಮೋತಕಪಲ್ಲಿ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು
ಮುಳಬಾಗಿಲು: ತಾಲ್ಲೂಕಿನ ಮೋತಕಪಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಮಕ್ಕಳ ಗ್ರಾಮಸಭೆ ಹಮ್ಮಿಕೊಳ್ಳಲಾಯಿತು.
ಮಕ್ಕಳ ಗ್ರಾಮಸಭೆ ಉದ್ದೇಶಿಸಿ ಮಾತನಾಡಿ, ‘ಪಂಚಾಯಿತಿ ವ್ಯಾಪ್ತಿಯ ಎಲ್ಲ ಶಾಲೆಗಳ ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು’ ಎಂದು ಹೇಳಿದರು.
ಸರ್ಕಾರದ ವಿವಿಧ ಯೋಜನೆ ಅಡಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಅವಕಾಶ ಇದೆ. ಆದ್ದರಿಂದ ಆಯಾ ಶಾಲಾ ಶಿಕ್ಷಕರು ಶಾಲೆಯಲ್ಲಿನ ಸಮಸ್ಯೆ ಹಾಗೂ ಕುಂದುಕೊರತೆಗಳನ್ನು ಮುಕ್ತವಾಗಿ ತಿಳಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಲ್ಲಾ ಶಾಲಾ ಮಕ್ಕಳು ಗ್ರಾಮ ಸಭೆಯಲ್ಲಿ ತಮ್ಮ ಶಾಲೆ ಮೂಲಭೂತ ಸಮಸ್ಯೆಗಳ ಬಗ್ಗೆ ಹಾಗೂ ಮಕ್ಕಳ ಹಕ್ಕು, ಕರ್ತವ್ಯ, ಕಾಯ್ದೆಗಳು, ಘೋಷಣೆಗಳು ಮತ್ತು ಜವಾಬ್ದಾರಿಗಳು ಸೇರಿದಂತೆ ಇತರೆ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಮಕ್ಕಳ ಗ್ರಾಮಸಭೆಯಲ್ಲಿ ಉತ್ತಮ ಭಾಷಣ ಮಾಡಿದ ಮತ್ತು ಉತ್ತಮ ಚಟುವಟಿಕೆಗಳನ್ನು ನೀಡಿದ ಶಾಲಾ ಮಕ್ಕಳಿಗೆ ಪಂಚಾಯಿತಿಯಿಂದ ಬಹುಮಾನ ವಿತರಿಸಲಾಯಿತು.
ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಆಚಂಪಲ್ಲಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಕೆ.ಎನ್.ತಾಯಲೂರಪ್ಪ ಅವರನ್ನು ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಜಲಿ ವೆಂಕಟೇಶ್, ಸದಸ್ಯರಾದ ಸುರೇಶ್ ಬಾಬು, ಜಯಮ್ಮ, ರುಕ್ಮಿಣಿ ಗಿರೀಶ್, ರಂಗಪ್ಪ, ಬಾಬು, ಆನಂದ್, ಪಂಚಾಯಿತಿ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿ.ಆರ್.ಪಿ ಶಿವಕುಮಾರ್ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.