ADVERTISEMENT

ಚೌಡಯ್ಯ ಜಯಂತಿ: ಸಾಂಕೇತಿಕ ಆಚರಣೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2019, 15:38 IST
Last Updated 21 ಜನವರಿ 2019, 15:38 IST
ಜಿಲ್ಲಾಡಳಿತವು ಕೋಲಾರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ ಪಲ್ಲಕ್ಕಿ ಮೆರವಣಿಗೆ ನಡೆಸಲಾಯಿತು.
ಜಿಲ್ಲಾಡಳಿತವು ಕೋಲಾರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ ಪಲ್ಲಕ್ಕಿ ಮೆರವಣಿಗೆ ನಡೆಸಲಾಯಿತು.   

ಕೋಲಾರ: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ನಿಧನದ ಹಿನ್ನೆಲೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಜಿಲ್ಲಾಡಳಿತವು ಇಲ್ಲಿನ ಟಿ.ಚನ್ನಯ್ಯ ರಂಗಮಂದಿರದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಹಮ್ಮಿಕೊಂಡಿತ್ತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಬೆಳಿಗ್ಗೆ ಅಂಬಿಗರ ಚೌಡಯ್ಯರ ಭಾವಚಿತ್ರಗಳ ಪಲ್ಲಕ್ಕಿ ಮೆರವಣಿಗೆ ಮಾಡಲಾಯಿತು. ಗಾರುಡಿ ಗೊಂಬೆ ಹಾಗೂ ಕೀಲು ಕುದುರೆ ಕಲಾವಿದರು ಮೆರವಣಿಗೆಗೆ ವಿಶೇಷ ಮೆರುಗು ನೀಡಿದರು.

ಶಿವಕುಮಾರ ಸ್ವಾಮೀಜಿಯವರ ನಿಧನದ ಸುದ್ದಿ ತಿಳಿದು ವೇದಿಕೆ ಕಾರ್ಯಕ್ರಮ ಮೊಟಕುಗೊಳಿಸಲಾಯಿತು. ಗಣ್ಯರು ಸಾಂಕೇತಿಕವಾಗಿ ಅಂಬಿಗರ ಚೌಡಯ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬೆಸ್ತ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನದ ಚೆಕ್‌ ವಿತರಿಸಲಾಯಿತು. ಗಣ್ಯರು ಹಾಗೂ ಸಭಿಕರು ಶಿವಕುಮಾರ ಸ್ವಾಮೀಜಿಯವರ ಸ್ಮರಣಾರ್ಥ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.