ADVERTISEMENT

ಕೋಲಾರ ಡಿಸಿಸಿ ಬ್ಯಾಂಕ್‌ ದೇಣಿಗೆ: ಮುಖ್ಯಮಂತ್ರಿ ಯಡಿಯೂರಪ್ಪ ಕೃತಜ್ಞತೆ

​ಪ್ರಜಾವಾಣಿ ವಾರ್ತೆ
Published 29 ಮೇ 2020, 16:23 IST
Last Updated 29 ಮೇ 2020, 16:23 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಕೋಲಾರ: ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮಾನವೀಯ ನೆಲೆಯಲ್ಲಿ ₹ 25 ಲಕ್ಷ ದೇಣಿಗೆ ನೀಡಿದ ಅವಿಭಜಿತ ಕೋಲಾರ ಜಿಲ್ಲೆಯ ಡಿಸಿಸಿ ಬ್ಯಾಂಕ್‌ ಆಡಳಿತ ಮಂಡಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಸಂಬಂಧ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಗೋವಿಂದಗೌಡರಿಗೆ ಪತ್ರ ಕಳುಹಿಸಿರುವ ಯಡಿಯೂರಪ್ಪ ಅವರು, ಕೊರೊನಾ ಸೋಂಕು ಹರಡುವಿಕೆ ತಡೆಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ 3 ಹಂತದಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗಿತ್ತು. ಇಂತಹ ಸಂಕಷ್ಟದ ಸಂದರ್ಭದಲ್ಲಿ ಪರಿಹಾರ ಕಾರ್ಯಕ್ಕೆ ಸರ್ಕಾರದ ನೆರವಿಗೆ ಬಂದ ಬ್ಯಾಂಕ್‌ಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದ ರೈತರು, ದಿನಗೂಲಿ ನೌಕರರು, ಕಟ್ಟಡ ಕಾರ್ಮಿಕರು, ಸಣ್ಣ ಕೈಗಾರಿಕೆಗಳ ಮಾಲೀಕರು, ಬೀದಿ ಬದಿ ವ್ಯಾಪಾರಿಗಳು, ಕ್ಯಾಬ್ ಮತ್ತು ಆಟೊ ಚಾಲಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂತ್ರಸ್ಥರ ನೆರವಿಗೆ ನಿಲ್ಲಲು ಹಾಗೂ ಸೋಂಕು ತಡೆಗೆ ಸುಸಜ್ಜಿತ ಆಸ್ಪತ್ರೆ, ಚಿಕಿತ್ಸೆ ನೀಡುವ ಸರ್ಕಾರದ ಜವಾಬ್ದಾರಿಯುತ ಪ್ರಯತ್ನಕ್ಕೆ ದೇಣಿಗೆ ನೀಡಿದ ಬ್ಯಾಂಕ್‌ನ ಕಾರ್ಯ ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ಪತ್ರದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಬ್ಯಾಂಕ್‌ ನೀಡಿರುವ ₹ 25 ಲಕ್ಷ ದೇಣಿಗೆಯನ್ನು ಹೃದಯಪೂರ್ವಕವಾಗಿ ಸ್ವೀಕರಿಸಲಾಗಿದೆ. ಕೋವಿಡ್-19 ನಿಯಂತ್ರಣಕ್ಕಾಗಿ ಬ್ಯಾಂಕ್‌ನ ಅಮೂಲ್ಯ ಹಣಕಾಸು ನೆರವು ಬಳಸಲು ಸರ್ಕಾರ ಪ್ರಾಮಾಣಿಕವಾಗಿ ಶ್ರಮಿಸುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.