
ಸಿಎಂಆರ್ ಶ್ರೀನಾಥ್
ಕೋಲಾರ: ಜಿಲ್ಲಾ ಜೆಡಿಎಸ್ ಅಧ್ಯಕ್ಷರ ಬದಲಾವಣೆಗೆ ಬಹಳ ದಿನಗಳಿಂದ ಕೂಗು ಎದ್ದಿದ್ದು, ಪಕ್ಷದ ಮುಖಂಡ ಸಿಎಂಆರ್ ಶ್ರೀನಾಥ್ ಅವರ ಹೆಸರು ಅಂತಿಮಗೊಂಡಿರುವುದು ಗೊತ್ತಾಗಿದೆ.
ಜೆ.ಕೆ.ಕೃಷ್ಣಾರೆಡ್ಡಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಶ್ರೀನಾಥ್ ಹೆಸರು ಪ್ರಸ್ತಾಪವಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಈ ಸಭೆಯಲ್ಲಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡ ಭಾಗವಹಿಸಿದ್ದರು.
ಈ ಸಭೆಯಲ್ಲಿ ಕೈಗೊಂಡ ನಿರ್ಧಾರವನ್ನು ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮುಂದಿಡಲಾಗುತ್ತದೆ. ಅವರು ಅಂತಿಮವಾಗಿ ಹೆಸರು ಪ್ರಕಟಿಸುವ ಸಾಧ್ಯತೆ ಇದೆ ಎಂಬುದು ತಿಳಿದುಬಂದಿದೆ.
ಕಳೆದ ಎಂಟು ವರ್ಷಗಳಿಂದ ಜಿ.ಕೆ.ವೆಂಕಟಶಿವಾರೆಡ್ಡಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿದ್ದಾರೆ. ಅವರು ಶಾಸಕರಾಗಿದ್ದು, ಈ ಹಿಂದೆಯೇ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಬಗ್ಗೆ ಮಾತನಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.