ADVERTISEMENT

ಶ್ರೀನಿವಾಸಪುರ:‌ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2021, 5:22 IST
Last Updated 10 ಸೆಪ್ಟೆಂಬರ್ 2021, 5:22 IST
ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ಬುಧವಾರ ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ಹನುಮಂತಪ್ಪ ಭೇಟಿ ನೀಡಿ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿಯರಿಗೆ ಸಾಂತ್ವನ ಹೇಳಿದರು
ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ಬುಧವಾರ ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ಹನುಮಂತಪ್ಪ ಭೇಟಿ ನೀಡಿ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿಯರಿಗೆ ಸಾಂತ್ವನ ಹೇಳಿದರು   

ಶ್ರೀನಿವಾಸಪುರ:‌ ತಾಲ್ಲೂಕಿನ ತಾಡಿಗೋಳ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿನಿ ಹಾಗೂ ಅವರ ಕುಟುಂಬಸ್ಥರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಹನುಮಂತಪ್ಪ ಒತ್ತಾಯಿಸಿದರು.

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲ್ಲೆಗೊಳಗಾದ ಯುವತಿ ಹಾಗೂ ಕುಟುಂಬದವರನ್ನು ಭೇಟಿ ಮಾಡಿದ ಬಳಿಕ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಎಸ್‍ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಬಿಜೆಪಿ ಮಹೇಶ್, ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸಪುರ ರಾಮಾಂಜಿ, ಎಸ್ಸಿ ಮೋರ್ಚಾ ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ಶ್ರೀನಾಥ್‍ಬಾಬು, ಪ್ರಧಾನ ಕಾರ್ಯದರ್ಶಿ ರಾಜು, ಉಪಾಧ್ಯಕ್ಷ ಸುರೇಶ್ ನಾಯಕ್ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.