ADVERTISEMENT

‘ಸಂವಿಧಾನ ಪವಿತ್ರ ಗ್ರಂಥ’

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 9:24 IST
Last Updated 27 ನವೆಂಬರ್ 2020, 9:24 IST
ಮಾಲೂರು ಪಟ್ಟಣದ ಅಂಬೇಡ್ಕರ್ ಉದ್ಯಾನದಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಶಾಸಕ ಕೆ.ವೈ. ನಂಜೇಗೌಡ ಪುಷ್ಪ ನಮನ ಸಲ್ಲಿಸಿದರು
ಮಾಲೂರು ಪಟ್ಟಣದ ಅಂಬೇಡ್ಕರ್ ಉದ್ಯಾನದಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಶಾಸಕ ಕೆ.ವೈ. ನಂಜೇಗೌಡ ಪುಷ್ಪ ನಮನ ಸಲ್ಲಿಸಿದರು   

ಮಾಲೂರು: ಸಂವಿಧಾನ ಭಾರತದ ಪವಿತ್ರ ಗ್ರಂಥ. ಈ ಗ್ರಂಥದ ಗಂಧದ ಮೂಲಕ ಪ್ರಜಾಪ್ರಭುತ್ವಕ್ಕೊಂದು ಅರ್ಥ ಕಲ್ಪಿಸಿಕೊಡುವ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.

ಪಟ್ಟಣದ ಅಂಬೇಡ್ಕರ್ ಉದ್ಯಾನದಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಗುರುವಾರ ಪುಷ್ಪ ನಮನ ಅರ್ಪಿಸಿ ಮಾತನಾಡಿದರು.

ಭಾರತದ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್‌ ಅವರು ಪ್ರಮುಖ ಪಾತ್ರ ವಹಿಸಿ ಇಡೀ ಜಗತ್ತಿಗೆ ಮಾದರಿಯಾಗುವಂತೆ ಸಂವಿಧಾನ ರಚಿಸಿದ್ದಾರೆ ಎಂದರು.

ADVERTISEMENT

ಪುರಸಭೆ ಅಧ್ಯಕ್ಷ ಮುರಳೀಧರ್, ಮಾಜಿ ಅಧ್ಯಕ್ಷ ಸಿ. ಲಕ್ಷ್ಮಿನಾರಾಯಣ್, ಮುಖಂಡರಾದ ವಿಜಯನಾರಸಿಂಹ, ಉಪಾಧ್ಯಕ್ಷ ಗೋವರ್ಧನ್ ರೆಡ್ಡಿ, ಅಶ್ವಥ್ ರೆಡ್ಡಿ, ಶಂಕರಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.