ADVERTISEMENT

ಕೊರೊನಾ: ಸೋಂಕು ಗಣನೀಯ ಇಳಿಕೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2020, 14:34 IST
Last Updated 15 ನವೆಂಬರ್ 2020, 14:34 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಹೊಸದಾಗಿ 8 ಮಂದಿಗೆ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ.

ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 3 ಮಂದಿ, ಕೋಲಾರ ಹಾಗೂ ಮಾಲೂರು ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿರುವುದು ಖಚಿತವಾಗಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 420ಕ್ಕೆ ಏರಿಕೆಯಾಗಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 48 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 8, ಮಾಲೂರು ತಾಲ್ಲೂಕಿನ 24, ಬಂಗಾರಪೇಟೆ ತಾಲ್ಲೂಕಿನ 5, ಮುಳಬಾಗಿಲು ತಾಲ್ಲೂಕಿನ 9, ಕೆಜಿಎಫ್‌ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.