ADVERTISEMENT

ಕೊರೊನಾ: ಸಾವಿನ ಸಂಖ್ಯೆ 156ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2020, 15:17 IST
Last Updated 4 ನವೆಂಬರ್ 2020, 15:17 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಓಟ ಮುಂದುವರಿದಿದ್ದು, ಬುಧವಾರ ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಿರುವ ಕೊರೊನಾ ಸೋಂಕಿತರ ಪೈಕಿ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 156ಕ್ಕೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಹೊಸದಾಗಿ 68 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 680ಕ್ಕೆ ಜಿಗಿದಿದೆ.

ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 27 ಮಂದಿಗೆ ಸೋಂಕು ಹರಡಿದೆ. ಉಳಿದಂತೆ ಮಾಲೂರು ತಾಲ್ಲೂಕಿನ 20, ಬಂಗಾರಪೇಟೆ ತಾಲ್ಲೂಕಿನ 7, ಕೆಜಿಎಫ್‌ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 5 ಹಾಗೂ ಮುಳಬಾಗಿಲು ತಾಲ್ಲೂಕಿನ 4 ಮಂದಿಗೆ ಸೋಂಕು ಬಂದಿದೆ.

ADVERTISEMENT

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ಕೊಂಚ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 84 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.ಕೋಲಾರ ತಾಲ್ಲೂಕಿನ 13 ಮಂದಿ, ಮಾಲೂರು ತಾಲ್ಲೂಕಿನ 29, ಬಂಗಾರಪೇಟೆ ತಾಲ್ಲೂಕಿನ 12, ಕೆಜಿಎಫ್‌ ತಾಲ್ಲೂಕಿನ 15, ಮುಳಬಾಗಿಲು ತಾಲ್ಲೂಕಿನ 10 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 5 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.