ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಗುಣಮುಖ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು, ಬುಧವಾರ 72 ಮಂದಿ ಆಸ್ಪತ್ರೆಯಿಂದ ಮನೆಗೆ ಮರಳಿದರು.
ಕೋಲಾರ ತಾಲ್ಲೂಕಿನ 25 ಮಂದಿ, ಮಾಲೂರು ತಾಲ್ಲೂಕಿನ 28, ಬಂಗಾರಪೇಟೆ ತಾಲ್ಲೂಕಿನ 7 ಹಾಗೂ ಕೆಜಿಎಫ್, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 4 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.
ಹೊಸದಾಗಿ 6 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 229ಕ್ಕೆ ಏರಿಕೆಯಾಗಿದೆ. ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರಿಗೆ, ಮಾಲೂರು ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ತಗುಲಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.