ADVERTISEMENT

ಕೊರೊನಾ ಸೋಂಕಿತ ಸಾವು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 16:45 IST
Last Updated 25 ಸೆಪ್ಟೆಂಬರ್ 2020, 16:45 IST

ಕೋಲಾರ: ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾ ಸೋಂಕಿತರೊಬ್ಬರು ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 79ಕ್ಕೆ ಏರಿಕೆಯಾಗಿದೆ.

ಇದರ ಬೆನ್ನೆಲ್ಲೇ ಹೊಸದಾಗಿ 68 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 887ಕ್ಕೆ ಹೆಚ್ಚಳವಾಗಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ.

ಹೊಸದಾಗಿ ಪತ್ತೆಯಾದ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 30 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಶುಕ್ರವಾರ ಮನೆಗೆ ಮರಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.