ADVERTISEMENT

ಕೊರೊನಾ ಸೋಂಕಿತ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 4:28 IST
Last Updated 22 ನವೆಂಬರ್ 2020, 4:28 IST

ಕೋಲಾರ: ಜಿಲ್ಲೆಯಲ್ಲಿ ಶನಿವಾರ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 169ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಬಂಗಾರಪೇಟೆ ತಾಲ್ಲೂಕಿನ ಸೋಂಕಿತ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 8 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 241ಕ್ಕೆ ಜಿಗಿದಿದೆ.

ಕೋಲಾರ ಮತ್ತು ಮಾಲೂರು ತಾಲ್ಲೂಕಿನ ತಲಾ ಇಬ್ಬರಿಗೆ, ಕೆಜಿಎಫ್‌ ತಾಲ್ಲೂಕಿನ 3 ಮಂದಿಗೆ ಹಾಗೂ ಮುಳಬಾಗಿಲು ತಾಲ್ಲೂಕಿನ ಒಬ್ಬರಿಗೆ ಸೋಂಕು ತಗುಲಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ಕೊಂಚ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 26 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.
ಕೋಲಾರ ತಾಲ್ಲೂಕಿನ 7, ಮಾಲೂರು, ಬಂಗಾರಪೇಟೆ ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ 3 ಮಂದಿ, ಕೆಜಿಎಫ್ ತಾಲ್ಲೂಕಿನ 9 ಮತ್ತು ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.