ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ದಿಢೀರ್ ಏರಿಕೆಯಾಗಿದ್ದು, ಹೊಸದಾಗಿ 9 ಮಂದಿಗೆ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 19ಕ್ಕೆ ಜಿಗಿದಿದೆ.
ಕೋಲಾರ ತಾಲ್ಲೂಕಿನ 4 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ 3 ಮಂದಿಗೆ, ಕೆಜಿಎಫ್ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೆಜಿಎಫ್ ತಾಲ್ಲೂಕಿನ 3, ಮುಳಬಾಗಿಲು ತಾಲ್ಲೂಕಿನ ಇಬ್ಬರು ಮತ್ತು ಕೋಲಾರ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.