ADVERTISEMENT

ಕೋಲಾರದಲ್ಲಿ ಕೊರೊನಾ ಸೋಂಕು ದಿಢೀರ್ ಏರಿಕೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 14:30 IST
Last Updated 5 ಜನವರಿ 2021, 14:30 IST
   

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ದಿಢೀರ್‌ ಏರಿಕೆಯಾಗಿದ್ದು, ಹೊಸದಾಗಿ 13 ಮಂದಿಗೆ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 99ಕ್ಕೆ ಜಿಗಿದಿದೆ.

ಕೋಲಾರ ತಾಲ್ಲೂಕಿನ 6 ಮಂದಿಗೆ, ಮಾಲೂರು ತಾಲ್ಲೂಕಿನ ಇಬ್ಬರಿಗೆ, ಮುಳಬಾಗಿಲು ತಾಲ್ಲೂಕಿನ 4 ಮಂದಿಗೆ ಮತ್ತು ಬಂಗಾರಪೇಟೆ ತಾಲ್ಲೂಕಿನ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 18 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 4, ಮಾಲೂರು ತಾಲ್ಲೂಕಿನ ಒಬ್ಬರು, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್‌ ತಾಲ್ಲೂಕಿನ 6, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಇಬ್ಬರನ್ನು ಮನೆಗೆ ಕಳುಹಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.