ADVERTISEMENT

ಕೋಲಾರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಕೊಂಚ ಏರಿಕೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2020, 16:33 IST
Last Updated 30 ಅಕ್ಟೋಬರ್ 2020, 16:33 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಕೊಂಚ ಏರಿಕೆಯಾಗಿದ್ದು, ಹೊಸದಾಗಿ 62 ಮಂದಿಗೆ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟಾರೆ ಸಕ್ರಿಯ ಸೋಂಕಿತರ ಸಂಖ್ಯೆ 635ಕ್ಕೆ ಏರಿಕೆಯಾಗಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ.

ಮಾಲೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು 18 ಮಂದಿಗೆ ಸೋಂಕು ಹರಡಿದೆ. ಉಳಿದಂತೆ ಕೋಲಾರ ತಾಲ್ಲೂಕಿನ 5, ಬಂಗಾರಪೇಟೆ ತಾಲ್ಲೂಕಿನ 11, ಕೆಜಿಎಫ್‌ ತಾಲ್ಲೂಕಿನ 13, ಮುಳಬಾಗಿಲು ತಾಲ್ಲೂಕಿನ 8 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 7 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 74 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 24 ಮಂದಿ, ಮಾಲೂರು ತಾಲ್ಲೂಕಿನ 20, ಬಂಗಾರಪೇಟೆ ತಾಲ್ಲೂಕಿನ 8, ಕೆಜಿಎಫ್‌ ತಾಲ್ಲೂಕಿನ 9, ಮುಳಬಾಗಿಲು ತಾಲ್ಲೂಕಿನ 10 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 3 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.