ADVERTISEMENT

28 ವಿದ್ಯಾರ್ಥಿನಿಯರಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 12:01 IST
Last Updated 7 ಜನವರಿ 2021, 12:01 IST

ಕೋಲಾರ: ಜಿಲ್ಲಾ ಕೇಂದ್ರದ ಆರ್‌.ಎಲ್‌.ಜಾಲಪ್ಪ ನರ್ಸಿಂಗ್‌ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿರುವುದು ಗುರುವಾರ ದೃಢಪಟ್ಟಿದೆ.

ವಾರದ ಹಿಂದೆಯಷ್ಟೇ ಕೇರಳದಿಂದ ಬಂದಿದ್ದ 27 ಮಂದಿ ಹಾಗೂ ಪಶ್ಚಿಮ ಬಂಗಾಳದಿಂದ ಬಂದಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿತ್ತು. ಗುರುವಾರ ಇವರೆಲ್ಲರ ವೈದ್ಯಕೀಯ ವರದಿ ಬಂದಿದ್ದು, ಸೋಂಕು ಹರಡಿರುವುದು ಖಚಿತವಾಗಿದೆ.

ಸೋಂಕಿತ ವಿದ್ಯಾರ್ಥಿನಿಯರನ್ನು ಕ್ವಾರಂಟೈನ್‌ ಮಾಡಲಾಗಿದೆ. ಅವರ ಸಂಪರ್ಕಕ್ಕೆ ಬಂದಿರುವ 410 ಮಂದಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದ್ದು, 2 ದಿನದಲ್ಲಿ ವೈದ್ಯಕೀಯ ವರದಿ ಬರುವ ನಿರೀಕ್ಷೆಯಿದೆ. ಸೋಂಕಿತ ವಿದ್ಯಾರ್ಥಿನಿಯರ ಹಾಸ್ಟೆಲ್‌ ಮತ್ತು ಕಾಲೇಜು ಸೀಲ್‌ಡೌನ್‌ ಮಾಡಲಾಗಿದೆ.

ADVERTISEMENT

ವಿದ್ಯಾಗಮ ಹಾಗೂ ಎಸ್ಸೆಸ್ಸೆಲ್ಸಿ ತರಗತಿ ಆರಂಭದ ಬಳಿಕ ಜಿಲ್ಲೆಯಲ್ಲಿ 8 ವಿದ್ಯಾರ್ಥಿಗಳು ಮತ್ತು 9 ಮಂದಿ ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.