ADVERTISEMENT

ಕೋಲಾರ: 97 ಪೊಲೀಸರಿಗೆ ಕೊರೊನಾ

​ಪ್ರಜಾವಾಣಿ ವಾರ್ತೆ
Published 18 ಮೇ 2021, 15:02 IST
Last Updated 18 ಮೇ 2021, 15:02 IST

ಕೋಲಾರ: ಜಿಲ್ಲೆಯಲ್ಲಿ 97 ಮಂದಿ ಪೊಲೀಸ್‌ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಕೋವಿಡ್‌ 2ನೇ ಅಲೆಯ ಆರ್ಭಟಕ್ಕೆ ಪೊಲೀಸ್‌ ಇಲಾಖೆ ಬೆಚ್ಚಿಬಿದ್ದಿದೆ.

ಸೋಂಕಿತ ಸಿಬ್ಬಂದಿ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದ 94 ಮಂದಿ ಮನೆಗಳಲ್ಲೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೀಸಲು ಪೊಲೀಸ್‌ ಪಡೆಯ ಸಹಾಯಕ ಸಬ್‌ಇನ್‌ಸ್ಪೆಕ್ಟರ್‌ ಒಬ್ಬರು ಕೊರೊನಾ ಸೋಂಕಿನಿಂದ ಮೂರು ದಿನದ ಹಿಂದೆ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯ ಎಸ್‌ಐ ಶಾಮಿಲಿ ಅವರು ಕೋವಿಡ್‌ನಿಂದ ಜಿಲ್ಲೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ. ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರಲ್ಲಿ ಆತಂಕ ಮನೆ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.