ADVERTISEMENT

ಮುಂದುವರಿದ ಸೋಂಕಿತರ ಸಾವಿನ ಸರಣಿ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 12:50 IST
Last Updated 5 ಡಿಸೆಂಬರ್ 2020, 12:50 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಶನಿವಾರ ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿರುವ ಸೋಂಕಿತರ ಪೈಕಿ ಮಾಲೂರು ತಾಲ್ಲೂಕಿನ ಒಬ್ಬರು ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 175ಕ್ಕೆ ಏರಿಕೆಯಾಗಿದೆ.

ಹೊಸದಾಗಿ 6 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 122ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನ 3 ಮಂದಿ, ಬಂಗಾರಪೇಟೆ ತಾಲ್ಲೂಕಿನ ಇಬ್ಬರಿಗೆ ಮತ್ತು ಮುಳಬಾಗಿಲು ತಾಲ್ಲೂಕಿನ ಒಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ADVERTISEMENT

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 3 ಮಂದಿ, ಬಂಗಾರಪೇಟೆ ತಾಲ್ಲೂಕಿನ ಇಬ್ಬರು ಹಾಗೂ ಮುಳಬಾಗಿಲು ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.