ADVERTISEMENT

ಕೊರೊನಾ: 5 ಸೋಂಕಿತರು ಸಾವು

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2020, 16:23 IST
Last Updated 11 ಅಕ್ಟೋಬರ್ 2020, 16:23 IST

ಕೋಲಾರ: ಜಿಲ್ಲೆಯಲ್ಲಿ ಭಾನುವಾರ 5 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 117ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಕೋಲಾರ, ಮಾಲೂರು ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ ಒಬ್ಬರು, ಕೆಜಿಎಫ್‌ ತಾಲ್ಲೂಕಿನ ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಇದರ ಬೆನ್ನಲ್ಲೇ ಹೊಸದಾಗಿ 152 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 1,606ಕ್ಕೆ ಜಿಗಿದಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಲಾರಂಭಿಸಿದೆ.

ADVERTISEMENT

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 46 ಮಂದಿಗೆ ಸೋಂಕು ತಗುಲಿದೆ. ಮಾಲೂರು ತಾಲ್ಲೂಕಿನ 26, ಬಂಗಾರಪೇಟೆ ತಾಲ್ಲೂಕಿನ 21, ಕೆಜಿಎಫ್ ತಾಲ್ಲೂಕಿನ 30, ಮುಳಬಾಗಿಲು ತಾಲ್ಲೂಕಿನ 17 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 12 ಮಂದಿಗೆ ಸೋಂಕು ಹರಡಿರುವುದು ಖಚಿತವಾಗಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು.

48 ಮಂದಿ ಗುಣಮುಖ: ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 48 ಮಂದಿ ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 18 ಮಂದಿ, ಮಾಲೂರು ತಾಲ್ಲೂಕಿನ 12, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್‌ ತಾಲ್ಲೂಕಿನ 8 ಮತ್ತು ಮುಳಬಾಗಿಲು ತಾಲ್ಲೂಕಿನ 7 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.