ADVERTISEMENT

ಕೋಲಾರ: ಕೋವಿಡ್‌ನಿಂದ ಗುಣಮುಖರಾದವರ ಪ್ರಮಾಣ ದಾಖಲೆ ಏರಿಕೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 15:33 IST
Last Updated 29 ಸೆಪ್ಟೆಂಬರ್ 2020, 15:33 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದ್ದು, ಮಂಗಳವಾರ ಆಸ್ಪತ್ರೆಯಿಂದ ಮನೆಗೆ ಮರಳಿದವರ ಸಂಖ್ಯೆ ಶತಕದ ಗಡಿ ದಾಟಿತು.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 108 ಮಂದಿ ಗುಣಮುಖರಾಗಿ ಮನೆಗೆ ತೆರಳಿದರು. ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, ಆರೋಗ್ಯ ಇಲಾಖೆ ನಿರಾಳವಾಗಿದೆ.

ಹೊಸದಾಗಿ 69 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 1,029ಕ್ಕೆ ಜಿಗಿದಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ.

ADVERTISEMENT

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.