ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ದಿಢೀರ್ ಏರಿಕೆಯಾಗಿದ್ದು, ಹೊಸದಾಗಿ 11 ಮಂದಿಗೆ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 20ಕ್ಕೆ ಜಿಗಿದಿದೆ.
ಕೆಜಿಎಫ್ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 3 ಮಂದಿಗೆ, ಕೋಲಾರ ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರಿಗೆ, ಮಾಲೂರು ತಾಲ್ಲೂಕಿನ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 3 ಮತ್ತು ಕೆಜಿಎಫ್ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.