ADVERTISEMENT

ಮತ್ತೆ 11 ಮಂದಿಗೆ ಕೊರೊನಾ ಸೋಂಕು

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 15:52 IST
Last Updated 10 ಜುಲೈ 2020, 15:52 IST
   

ಕೋಲಾರ: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 11 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 131ಕ್ಕೆ ಏರಿಕೆಯಾಗಿದೆ.

ಶುಕ್ರವಾರ ಬೆಳಿಗ್ಗೆವರೆಗೆ ಜಿಲ್ಲೆಯಲ್ಲಿ 136 ಮಂದಿ ಸಕ್ರಿಯ ಸೋಂಕಿತರಿದ್ದರು. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 16 ಮಂದಿ ಗುಣಮುಖರಾಗಿ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 9 ಸೋಂಕಿತರು, ಮಾಲೂರು ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ ಇಬ್ಬರು, ಮುಳಬಾಗಿಲು ತಾಲ್ಲೂಕಿನ ಮೂರು ಮಂದಿಯನ್ನು ಮನೆಗೆ ಕಳುಹಿಸಲಾಯಿತು.

ನಂತರ ಬಂಗಾರಪೇಟೆ ತಾಲ್ಲೂಕಿನಲ್ಲಿ ಸೋಂಕಿತ ವ್ಯಕ್ತಿ ಸಂಖ್ಯೆ 14,433ರ ಸಂಪರ್ಕದಿಂದ ಇಬ್ಬರಿಗೆ, ಹೊರ ಜಿಲ್ಲೆಗೆ ಹೋಗಿ ಬಂದಿದ್ದ 24 ವರ್ಷದ ಪುರುಷರೊಬ್ಬರಿಗೆ ಮತ್ತು ವಿಷಮ ಶೀತ ಜ್ವರದಿಂದ ಬಳಲುತ್ತಿರುವ 46 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದಾಗಿ ಪ್ರಯೋಗಾಲಯದ ವರದಿ ಬಂದಿದೆ.

ADVERTISEMENT

ಕೋಲಾರ ತಾಲ್ಲೂಕಿನಲ್ಲಿ 30 ವರ್ಷದ ಆರೋಗ್ಯ ಕಾರ್ಯಕರ್ತ, ವಿಷಮ ಶೀತ ಜ್ವರದಿಂದ ಬಳಲುತ್ತಿರುವ 33 ವರ್ಷದ ಪುರುಷ ಮತ್ತು 60 ವರ್ಷದ ವಯೋವೃದ್ಧ, ಹೊರ ಜಿಲ್ಲೆಗೆ ಹೋಗಿ ಬಂದಿದ್ದ 52 ವರ್ಷ ವ್ಯಕ್ತಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ.

ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಸೋಂಕಿತ ವ್ಯಕ್ತಿ ಸಂಖ್ಯೆ 10,445ರ ಸಂಪರ್ಕದಿಂದ 50 ವರ್ಷದ ಮಹಿಳೆಗೆ, ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 35 ವರ್ಷದ ಪುರುಷ ಮತ್ತು ಕೆಜಿಎಫ್‌ ತಾಲ್ಲೂಕಿನಲ್ಲಿ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ 53 ವರ್ಷದ ವ್ಯಕ್ತಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.