ADVERTISEMENT

ಕೋಲಾರ: 31 ಮಂದಿಗೆ ಕೊರೊನಾ ಸೋಂಕು

​ಪ್ರಜಾವಾಣಿ ವಾರ್ತೆ
Published 31 ಜುಲೈ 2020, 15:33 IST
Last Updated 31 ಜುಲೈ 2020, 15:33 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 31 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಶುಕ್ರವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 783ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 45 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಶುಕ್ರವಾರ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ ಮೂವರು, ಮಾಲೂರು ಹಾಗೂ ಬಂಗಾರಪೇಟೆ ತಾಲ್ಲೂಕಿನ ತಲಾ ಇಬ್ಬರು, ಮುಳಬಾಗಿಲು ತಾಲ್ಲೂಕಿನ 37 ಮಂದಿ ಹಾಗೂ ಕೆಜಿಎಫ್‌ ತಾಲ್ಲೂಕಿನ ಒಬ್ಬರನ್ನು ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT