ADVERTISEMENT

ಕೋಲಾರ: ಮುಂದುವರಿದ ಕೋವಿಡ್-19 ಸೋಂಕಿತರ ಸಾವಿನ ಸರಣಿ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 14:14 IST
Last Updated 17 ಆಗಸ್ಟ್ 2021, 14:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಮಂಗಳವಾರ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 615ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸರಣಿ ಸಾವಿನ ಬೆನ್ನಲ್ಲೇ ಹೊಸದಾಗಿ 17 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 203ಕ್ಕೆ ಇಳಿಕೆಯಾಗಿದೆ. ಕೋಲಾರ ತಾಲ್ಲೂಕಿನ 9 ಮಂದಿಗೆ, ಮಾಲೂರು ತಾಲ್ಲೂಕಿನ ಒಬ್ಬರಿಗೆ, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರಿಗೆ, ಶ್ರೀನಿವಾಸಪುರ ತಾಲ್ಲೂಕಿನ 3 ಮಂದಿಗೆ ಸೋಂಕು ತಗುಲಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 32 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ADVERTISEMENT

ಕೋಲಾರ ತಾಲ್ಲೂಕಿನ 13 ಮಂದಿ, ಮಾಲೂರು ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ 8 ಮಂದಿ, ಕೆಜಿಎಫ್‌, ಮುಳಬಾಗಿಲು ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.