ಕೋಲಾರ: ಜಿಲ್ಲೆಯಲ್ಲಿ ಬುಧವಾರ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 616ಕ್ಕೆ ಏರಿಕೆಯಾಗಿದೆ.
ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೆಜಿಎಫ್ ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 21 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 191ಕ್ಕೆ ಇಳಿಕೆಯಾಗಿದೆ.
ಕೋಲಾರ ತಾಲ್ಲೂಕಿನ 12 ಮಂದಿಗೆ, ಮಾಲೂರು, ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕಿನ ತಲಾ ಒಬ್ಬರಿಗೆ, ಮುಳಬಾಗಿಲು ತಾಲ್ಲೂಕಿನ ಇಬ್ಬರಿಗೆ, ಶ್ರೀನಿವಾಸಪುರ ತಾಲ್ಲೂಕಿನ 4 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 32 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 10 ಮಂದಿ, ಮಾಲೂರು ಮತ್ತು ಕೆಜಿಎಫ್ ತಾಲ್ಲೂಕಿನ ತಲಾ 3 ಮಂದಿ, ಬಂಗಾರಪೇಟೆ ತಾಲ್ಲೂಕಿನ 8, ಮುಳಬಾಗಿಲು ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ 4 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.