ADVERTISEMENT

ಕೋವಿಡ್-19 ಸೋಂಕಿತರ ಸಾವಿನ ಸಂಖ್ಯೆ 625ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 13:40 IST
Last Updated 3 ಸೆಪ್ಟೆಂಬರ್ 2021, 13:40 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕೋಲಾರ: ಜಿಲ್ಲೆಯ ಕೆಜಿಎಫ್‌ ತಾಲ್ಲೂಕಿನ ಕೊರೊನಾ ಸೋಂಕಿತರೊಬ್ಬರು ಶುಕ್ರವಾರ ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 625ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 9 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 230ಕ್ಕೆ ಏರಿಕೆಯಾಗಿದೆ. ಕೋಲಾರ ತಾಲ್ಲೂಕಿನ 3 ಮಂದಿಗೆ, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರಿಗೆ, ಕೆಜಿಎಫ್‌ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 22 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ADVERTISEMENT

ಕೋಲಾರ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 4 ಮಂದಿ, ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರು, ಕೆಜಿಎಫ್‌ ತಾಲ್ಲೂಕಿನ 10 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.