ADVERTISEMENT

ಕೋಲಾರ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 643ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 13:53 IST
Last Updated 25 ನವೆಂಬರ್ 2021, 13:53 IST
   

ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕೊರೊನಾ ಸೋಂಕಿತರೊಬ್ಬರು ಗುರುವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 643ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ ಇಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 31ಕ್ಕೆ ಜಿಗಿದಿದೆ. ಕೆಜಿಎಫ್‌ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 4 ಮಂದಿ ಗುಣಮುಖರಾಗಿ ಮನೆಗೆ ಮರಳಿದರು. ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು, ಕೆಜಿಎಫ್‌ ತಾಲ್ಲೂಕಿನ ಇಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.