ADVERTISEMENT

ಕೊರೊನಾ ಸೋಂಕಿತರ ಸಾವಿನ ನಾಗಾಲೋಟ

​ಪ್ರಜಾವಾಣಿ ವಾರ್ತೆ
Published 4 ಮೇ 2021, 15:20 IST
Last Updated 4 ಮೇ 2021, 15:20 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ನಾಗಾಲೋಟ ಮುಂದುವರಿದಿದ್ದು, ಮಂಗಳವಾರ 7 ಮಂದಿ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 244ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ 3 ಮಂದಿ, ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರು ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 836 ಮಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 3,669ಕ್ಕೆ ಜಿಗಿದಿದೆ.

ಸೋಂಕಿತರ ಸಾವು ಹಾಗೂ ಸೋಂಕು ಹರಡುವಿಕೆ ಪ್ರಮಾಣವು ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದ್ದು, ಜಿಲ್ಲೆಯ ಜನರು ಕೋವಿಡ್‌ 2ನೇ ಅಲೆಯ ಆರ್ಭಟಕ್ಕೆ ಬೆಚ್ಚಿಬಿದ್ದಿದ್ದಾರೆ.

ADVERTISEMENT

ಕೋಲಾರ ತಾಲ್ಲೂಕಿನ 218 ಮಂದಿಗೆ, ಮಾಲೂರು ತಾಲ್ಲೂಕಿನ 184 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 97 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 144 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 94 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 99 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 764 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 264 ಮಂದಿ, ಮಾಲೂರು ತಾಲ್ಲೂಕಿನ 135, ಬಂಗಾರಪೇಟೆ ತಾಲ್ಲೂಕಿನ 57, ಕೆಜಿಎಫ್‌ ತಾಲ್ಲೂಕಿನ 75, ಮುಳಬಾಗಿಲು ತಾಲ್ಲೂಕಿನ 151 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 82 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.