ADVERTISEMENT

ಸೋಂಕಿತರ ಸಾವಿನ ಸಂಖ್ಯೆ 135ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 14:48 IST
Last Updated 18 ಅಕ್ಟೋಬರ್ 2020, 14:48 IST

ಕೋಲಾರ: ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 135ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಕೆಜಿಎಫ್‌ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 63 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,306ಕ್ಕೆ ಜಿಗಿದಿದೆ.

ಮಾಲೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು 23 ಮಂದಿಗೆ ಸೋಂಕು ತಗಲಿರುವುದು ಖಚಿತವಾಗಿದೆ. ಕೋಲಾರ ತಾಲ್ಲೂಕಿನ 14, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್‌ ತಾಲ್ಲೂಕಿನ 12, ಮುಳಬಾಗಿಲು ತಾಲ್ಲೂಕಿನ 6 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 5 ಮಂದಿಗೆ ಸೋಂಕು ಹರಡಿದೆ.

ADVERTISEMENT

ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ಕೊಂಚ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 106 ಮಂದಿ ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 36 ಮಂದಿ, ಮಾಲೂರು ತಾಲ್ಲೂಕಿನ 23, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್‌ ತಾಲ್ಲೂಕಿನ 8, ಮುಳಬಾಗಿಲು ತಾಲ್ಲೂಕಿನ 31 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 5 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.