ಕೋಲಾರ: ಜಿಲ್ಲೆಯಲ್ಲಿ ಕೋವಿಡ್ ಮರಣ ಮೃದಂಗ ಮುಂದುವರಿದಿದ್ದು, ಶನಿವಾರ 6 ಮಂದಿ ಕೊರೊನಾ ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 249ಕ್ಕೆ ಏರಿಕೆಯಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತರ ಪೈಕಿ ಕೋಲಾರ ಮತ್ತು ಕೆಜಿಎಫ್ ತಾಲ್ಲೂಕಿನ ತಲಾ ಇಬ್ಬರು, ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರು ಮೃತಪಟ್ಟಿದ್ದಾರೆ.
ಇದರ ಬೆನ್ನಲ್ಲೇ ಹೊಸದಾಗಿ 903 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 4,792ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನ 240 ಮಂದಿಗೆ, ಮಾಲೂರು ತಾಲ್ಲೂಕಿನ 180 ಮಂದಿಗೆ, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 110 ಮಂದಿಗೆ, ಕೆಜಿಎಫ್ ತಾಲ್ಲೂಕಿನ 177 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 86 ಮಂದಿಗೆ ಸೋಂಕು ಬಂದಿದೆ.
ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 415 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.
ಕೋಲಾರ ತಾಲ್ಲೂಕಿನ 93 ಮಂದಿ, ಮಾಲೂರು ತಾಲ್ಲೂಕಿನ 76, ಬಂಗಾರಪೇಟೆ ತಾಲ್ಲೂಕಿನ 85, ಕೆಜಿಎಫ್ ತಾಲ್ಲೂಕಿನ 55, ಮುಳಬಾಗಿಲು ತಾಲ್ಲೂಕಿನ 16 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 90 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.