ADVERTISEMENT

ಕೋವಿಡ್‌: ಗಣರಾಜ್ಯೋತ್ಸವ ಸರಳ ಆಚರಣೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 15:15 IST
Last Updated 14 ಜನವರಿ 2022, 15:15 IST
ಪ್ರಭಾರ ಜಿಲ್ಲಾಧಿಕಾರಿ ಯುಕೇಶ್‌ಕುಮಾರ್‌ ಗಣ ರಾಜ್ಯೋತ್ಸವ ಆಚರಣೆ ಸಂಬಂಧ ಕೋಲಾರದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿದರು
ಪ್ರಭಾರ ಜಿಲ್ಲಾಧಿಕಾರಿ ಯುಕೇಶ್‌ಕುಮಾರ್‌ ಗಣ ರಾಜ್ಯೋತ್ಸವ ಆಚರಣೆ ಸಂಬಂಧ ಕೋಲಾರದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿದರು   

ಕೋಲಾರ: ‘ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಸರಳ ರೀತಿಯಲ್ಲಿ ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಿಸಬೇಕು’ ಎಂದು ಪ್ರಭಾರ ಜಿಲ್ಲಾಧಿಕಾರಿ ಯುಕೇಶ್‌ಕುಮಾರ್‌ ಸೂಚಿಸಿದರು.

ಗಣರಾಜ್ಯೋತ್ಸವ ಆಚರಣೆ ಸಂಬಂಧ ಇಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಕೋವಿಡ್‌ ಆತಂಕದ ಕಾರಣಕ್ಕೆ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ನೆರವೇರಿಸಬೇಕು’ ಎಂದು ತಿಳಿಸಿದರು.

‘ಜ.26ರಂದು ಬೆಳಿಗ್ಗೆ 8.45ಕ್ಕೆ ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಲೋಕೋಪಯೋಗಿ ಇಲಾಖೆಯುವರು ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ ಮಾಡಬೇಕು. ವೇದಿಕೆ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆಯವರು ನಿರ್ವಹಿಸಬೇಕು’ ಎಂದು ಹೇಳಿದರು.

ADVERTISEMENT

‘ಕಾರ್ಯಕ್ರಮಕ್ಕೆ ಬರುವ ಗಣ್ಯರು ಮತ್ತು ಅತಿಥಿಗಳಿಗೆ ಲಘು ಉಪಹಾರದ ವ್ಯವಸ್ಥೆ ಮಾಡಬೇಕು. ಕೋಚಿಮುಲ್ ವತಿಯಿಂದ ಸಹಿ ತಿಂಡಿ ಮತ್ತು ಮಜ್ಜಿಗೆ ವಿತರಿಸಬೇಕು, ಕಾರ್ಯಕ್ರಮದಲ್ಲಿ ಕೋವಿಡ್‌ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಘೋರ್ಪಡೆ, ಉಪ ವಿಭಾಗಾಧಿಕಾರಿ ಆನಂದ್‌ಪ್ರಕಾಶ್ ಮೀನಾ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.