ADVERTISEMENT

ಕೊರೊನಾ: ಕೋಲಾರ ಜಿಲ್ಲೆಯಲ್ಲಿ 5 ಸೋಂಕಿತರ ಸಾವು

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 16:30 IST
Last Updated 1 ಅಕ್ಟೋಬರ್ 2020, 16:30 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಪ್ರಮಾಣ ದಿಢೀರ್‌ ಏರಿಕೆಯಾಗಿದ್ದು, ಗುರುವಾರ ಒಂದೇ ದಿನ 5 ಮಂದಿ ಸೋಂಕಿತರು ಕೊನೆಯುಸಿರೆಳೆದಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾದ ನಂತರ ಇದೇ ಮೊದಲ ಬಾರಿಗೆ ಒಂದೇ ದಿನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೋಂಕಿತರು ಮೃತಪಟ್ಟಿದ್ದು, ಆರೋಗ್ಯ ಇಲಾಖೆಯ ಆತಂಕ ಹೆಚ್ಚಿಸಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 5 ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 89ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 82 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,065ಕ್ಕೆ ಜಿಗಿದಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು.

ADVERTISEMENT

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 68 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುರುವಾರ ಮನೆಗೆ ಮರಳಿದರು. ಕಳೆದೊಂದು ವಾರಕ್ಕೆ ಹೋಲಿಸಿದರೆ ಸೋಂಕಿತರ ಗುಣಮುಖ ಪ್ರಮಾಣದಲ್ಲಿ ಕೊಂಚ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.