ADVERTISEMENT

ಕೋಲಾರ: 53 ಮಂದಿಗೆ ಕೊರೊನಾ ಸೋಂಕು

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 15:08 IST
Last Updated 2 ಅಕ್ಟೋಬರ್ 2020, 15:08 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 53 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಶುಕ್ರವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,051ಕ್ಕೆ ಏರಿಕೆಯಾಗಿದೆ.

ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ. ಹೊಸದಾಗಿ ಪತ್ತೆಯಾದ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 67 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.